Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯದ ದನಿ ಅರಸು

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌
, ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಬುಧವಾರ  ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್‌ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ, ಸದ್ಭಾವನಾ ದಿನ ಕಾರ್ಯಕ್ರಮ ನಡೆಯಿತು.

ದೇವರಾಜ್‌ ಅರಸ್‌ ಹಾಗೂ ರಾಜೀವ್‌ಗಾಂಧಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಹಿಂದುಳಿದ ವರ್ಗಗಳ ಸಮಗ್ರ ಅಭ್ಯುದಯದ ಆಶಯವನ್ನು ಬಿತ್ತುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ವ್ಯವಸ್ಥಿತವಾಗಿ ಜಾರಿಗೆ ತಂದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ಹಾಗೂ ರಾಜೀವ್‌ಗಾಂಧಿ ತಮ್ಮ ಕಾರ್ಯವ್ಯಾಪ್ತಿ ಮತ್ತು ಆಲೋಚನಾ ಬದ್ದತೆಯಿಂದ ದೇಶದ ಭವಿಷ್ಯವನ್ನು ಸದೃಢಗೊಳಿಸಿದ್ದಾರೆ ಎಂದರು.

ಜಾಲಪ್ಪನವರ ರಾಜಕಾರಣದ ದಿಕ್ಕುದೆಸೆಯನ್ನು ಸ್ಪಷ್ಟಗೊಳಿಸಿದ್ದು ದೇವರಾಜ್‌ ಅರಸ್‌. ಹೀಗಾಗಿಯೇ ಅವರ ಹೆಸರನ್ನೇ ವಿದ್ಯಾ ಸಂಸ್ಥೆಗೆ ಇಡಲಾಗಿದೆ. ಎಲ್ಲ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು ಪ್ರಭಾವಿಸಿದ್ದು, ಅವರ ಆದರ್ಶಗಳು ಪಾಲನೀಯ ಎಂದರು.

ಜಾಲಪ್ಪ ರಾಜಕೀಯ ನಡೆಗೆ ಅರಸು ಪ್ರಭಾವ:
ಮುಖ್ಯಭಾಷಣಕಾರರಾಗಿ ಮಾತನಾಡಿದ ಜಾಲಪ್ಪ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಕೆ.ಆರ್.ರವಿಕಿರಣ್‌, ದೇವರಾಜ ಅರಸ್‌ ಮುಖ್ಯಮಂತ್ರಿಗಳಾಗಿದ್ದ ವೇಳೆ ಉಳುವವನೇ ಭೂಮಿಯ ಒಡೆಯ ಎಂಬ ಘೋಷವಾಕ್ಯದಡಿ ಭೂ ಒಡೆತನವನ್ನು ಶೋಷಿತವರ್ಗಗಳಿಗೆ ನೀಡಿದರು. ಎಲ್.ಜಿ.ಹಾವನೂರ್‌ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಪ್ರಬಲ ಸಮುದಾಯಗಳ ನಡುಗೆ ಹಿಂದುಳಿದ ವರ್ಗಗಳಿಗೂ ಅವಕಾಶ ಮತ್ತು ಸಮಾನತೆಯನ್ನು ಒದಗಿಸುವ ಸಂಕಲ್ಪ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಹೆಗ್ಗಳಿಕೆ ಅವರದು. ಆರ್.ಎಲ್.ಜಾಲಪ್ಪನವರ ರಾಜಕೀಯ ನಡೆಯಲ್ಲಿ ಅರಸು ಅವರ ಒತ್ತಾಸೆ ಪ್ರಮುಖ ಎಂದು ಅಭಿಪ್ರಾಯಪಟ್ಟರು.

ಯುವಜನರ ಶಕ್ತಿಯಾಗಿದ್ದ ರಾಜೀವ್‌ಗಾಂಧಿ ಡಿಜಿಟಲ್‌ ಇಂಡಿಯಾದ ಪರಿಕಲ್ಪನೆಯನ್ನು ಜಾರಿಗೆ ತರುವ ಸಾಹಸ ಮಾಡಿದವರು. ಆರಂಭಿಕ ಕಾಲಘಟ್ಟದಲ್ಲಿ ದೂರ ಸಂಪರ್ಕ ಕ್ರಾಂತಿಗೆ ಮುನ್ನುಡಿ ಬರೆದ ಅವರು, ಮತದಾನದ ಹಕ್ಕು ವಯೋಮಿತಿಯನ್ನು 18 ವರ್ಷಕ್ಕೆ ಇಳಿಸುವ ಮೂಲಕ ಯುವಶಕ್ತಿಯ ಪ್ರೇರಕರಾದರು. ಅವರ ಜನ್ಮದಿನದ ಸಂದರ್ಭದಲ್ಲಿ ಸದ್ಭಾವನಾ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣ ಎಂದರು.

ಇದೇ ವೇಳೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ವಿದ್ಯಾ ಸಂಸ್ಥೆಯ ಗೌರ್ನಿಂಗ್‌ ಕೌನ್ಸಿಲ್‌ ಸದಸ್ಯರಾದ ಎನ್.ತೇಜಸ್ವಿನಿ, ಜೆ.ಆರ್.ರಾಕೇಶ್, ವಿದ್ವತ್‌, ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ಡೀನ್‌ ಡಾ.ಶ್ರೀನಿವಾಸರೆಡ್ಡಿ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರಾದ ಡಾ.ವಿಜಯ್‌ಕಾರ್ತಿಕ್‌,

ಡಾ.ಗೌರಪ್ಪ, ಡಾ.ನರಸಿಂಹರೆಡ್ಡಿ, ಡಾ.ಚಿಕ್ಕಣ್ಣ, ಮಹಂತೇಶಪ್ಪ, ರವಿಕುಮಾರ್, ಧನಂಜಯ್, ಜಿಯಾವುಲ್ಲಾಖಾನ್, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ವ್ಯವಸ್ಥಾಪಕ ಯತಿನ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವಿವಿಧ ಘಟಕಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!