Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪಿಎಲ್ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ನಾಗರಾಜು, ಉಪಾಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿಯಮಿತದ ಚುನಾವಣೆ ನಡೆದಿದ್ದು
, ಅಧ್ಯಕ್ಷರ ಆಯ್ಕೆಗೆ ಜೂನ್೭ರ ಶನಿವಾರ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಕೆ.ಸಿ.ನಾಗರಾಜರವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.

ಕೆ.ಸಿ.ನಾಗರಾಜು ಇದೇ ಮೊದಲಬಾರಿಗೆ ಸ್ಪರ್ಧಿಸಿ ಅವಿರೋಧ ಆಯ್ಕೆಯಾಗಿದ್ದು, ಎಲ್ಲಾ ನಿರ್ದೇಶಕರ ವಿಶ್ವಾಸ ಪಡೆದು ಅಧ್ಯಕ್ಷರಾಗಿ ಆಯ್ಕೆಗೊಂಡರು. ಕೆ.ಸಿ.ನಾಗರಾಜ ಕಿರಿಯ ಸಹೋದರ ಕೆ.ಸಿ.ವೀರೇಂದ್ರ(ಪಪ್ಪಿ) ಸಹ ಕಳೆದ ಅವಧಿಯಲ್ಲಿ ಬ್ಯಾಂಕ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

ಪ್ರಸ್ತುತ ಬ್ಯಾಂಕ್‌ನಲ್ಲಿ ೧೫ ಸ್ಥಾನಗಳಿದ್ದು, ಒಂದು ಸ್ಥಾನ ಮಾತ್ರ ಸರ್ಕಾರಿ ನಾಮನಿರ್ದೇಶವಾಗಿದ್ದು ಉಳಿದ ಎಲ್ಲಾ ೧೪ ಸ್ಥಾನಗಳು ಚುನಾವಣೆ ಮೂಲಕ ಆಯ್ಕೆಗೊಂಡಿದ್ದವು. ಅಧ್ಯಕ್ಷರಾಗಿ ಕೆ.ಸಿ.ನಾಗರಾಜು, ಉಪಾಧ್ಯಕ್ಷರಾಗಿ ಚನ್ನಗಾನಹಳ್ಳಿಯ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಗೊಂಡರು. ಉಳಿದಂತೆ ನಿರ್ದೇಶಕರಾಗಿ ಕ್ಯಾದಿಗುಂಟೆ ಕೆ.ಜಲ್ದೀರಪ್ಪ, ಬುಕ್ಕಾಂಬೂದಿ ಎನ್.ಮಂಜುನಾಥ, ಭರಮಸಾಗರ ಬಿ.ವೀರಭದ್ರಪ್ಪ, ಚಿಗತನಹಳ್ಳಿ ಸಿ.ಎಲ್.ಸತೀಶ್‌ಬಾಬು, ಕುರುಡಿಹಳ್ಳಿ ಸಿ.ಎ.ಪ್ರಶಾಂತ್, ಗೊರ್‍ಲತ್ತು ಮಹದೇವಮ್ಮ, ಮೈಲನಹಳ್ಳಿ ಓಬಳಮ್ಮ, ತಳಕು ಟಿಎಟಿ ಕುಮಾರ್, ನೇರ್‍ಲಗುಂಟೆ ಚಂದ್ರಣ್ಣ, ಅಬ್ಬೇನಹಳ್ಳಿ ಬಿ.ನಾಗರಾಜು, ನರಹರಿ ನಗರದ ಬಿ.ಸಿ.ಸತೀಶ್‌ಕುಮಾರ್, ಹಾಲಿಗೊಂಡನಹಳ್ಳಿ ಪುಟ್ಟೀರಮ್ಮ ನಿರ್ದೇಶಕರಾಗಿ ಆಯ್ಕೆಯಾಗಿದ್ಧಾರೆ.

ನೂತನ ಅಧ್ಯಕ್ಷ ಕೆ.ಸಿ.ನಾಗರಾಜು ಪತ್ರಿಕೆಯೊಂದಿಗೆ ಮಾತನಾಡಿ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ತನ್ನದೇಯಾದ ಇತಿಹಾಸ ಹೊಂದಿದೆ. ಸಹಕಾರಿ ದುರೀಣ ದಿವಂಗತ ಬಿ.ಎಲ್.ಗೌಡ, ಕುರುಡಿಹಳ್ಳಿಯ ತಿಮ್ಮಾರೆಡ್ಡಿಯಂತಹ ಹಿರಿಯ ನಾಯಕರು ಬ್ಯಾಂಕ್‌ನ ಅಭಿವೃದ್ದಿಗೆ ಶ್ರಮಿಸಿದ್ಧಾರೆ.

ತಾಲ್ಲೂಕಿನಾದ್ಯಂತ ರೈತರ ಸಮುದಾಯಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಇಲಾಖೆ ಮತ್ತು ಸರ್ಕಾರದಿಂದ ಮಾರ್ಗದರ್ಶನ ಪಡೆದು ರೈತರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಬ್ಯಾಂಕ್‌ನ ಎಲ್ಲಾ ನಿರ್ದೇಶಕರು ಸೇರಿ ನನಗೆ ಅಧ್ಯಕ್ಷ ಸ್ಥಾನ ನೀಡಿದ್ದು, ಇದನ್ನು ಸಾರ್ವಜನಿಕವಾಗಿ ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಬ್ಯಾಂಕ್ ಅಭಿವೃದ್ದಿಗೆ ಶ್ರಮಿಸುವ ಭರವಸೆ ನೀಡಿದರು. ವ್ಯವಸ್ಥಾಪಕ ಪ್ರಭು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!