Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧ

ಚಂದ್ರವಳ್ಳಿ ನ್ಯೂಸ್ ಹಿರಿಯೂರು:             ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ (VJNL) ವ್ಯಾಪ್ತಿಗೆ ಒಳಪಡುವ ಐತಿಹಾಸಿಕ ವಾಣಿ ವಿಲಾಸ ಸಾಗರ (ವಿ.ವಿ. ಸಾಗರ) ಹಾಗೂ ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
​ಅಣೆಕಟ್ಟುಗಳ ಸುರಕ್ಷತಾ ಕಾಯ್ದೆ-2021ರ (Dam Safety Act-2021) ನಿಯಮಾವಳಿಗಳ ಪ್ರಕಾರ, ಈ ಎರಡೂ ಜಲಾಶಯಗಳ ಸಮಗ್ರ ಅಣೆಕಟ್ಟು ಸುರಕ್ಷತಾ ಮೌಲ್ಯಮಾಪನ (Comprehensive Dam Safety Evaluation - CDSE) ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸ್ವತಂತ್ರ ತಜ್ಞರ ಸಮಿತಿ (Independent Panel of Experts - IPoE) ದಿನಾಂಕ 12.08.2026 ರಿಂದ 16.08.2026 ರವರೆಗೆ ಜಲಾಶಯಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಸಮಗ್ರ ಪರಿಶೀಲನೆ ನಡೆಸಲಿದೆ.

ತಜ್ಞರ ತಂಡದ ಪರಿಶೀಲನೆ ಕಾರ್ಯದ ಜೊತೆಗೆ ಕೆಲವು ಅತ್ಯಂತ ತುರ್ತು ಅಣೆಕಟ್ಟು ಸುರಕ್ಷತಾ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿದೆ.

ಆದ್ದರಿಂದ ಸುರಕ್ಷತೆಯ ಹಿತದೃಷ್ಟಿಯಿಂದ ಆಗಸ್ಟ್ 12 ರಿಂದ ಆಗಸ್ಟ್ 16 ರವರೆಗೆ (5 ದಿನಗಳು) ಸಾರ್ವಜನಿಕರು ಮತ್ತು ವೀಕ್ಷಕರಿಗೆ ಜಲಾಶಯ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕಾರ್ಯಪಾಲಕ ಇಂಜಿನಿಯರ್, ವಿ.ಜ.ನಿ.ನಿ., ಭದ್ರಾ ಮೇಲ್ದಂಡೆ ಯೋಜನೆ, ವಿಭಾಗ ನಂ.07, ಹಿರಿಯೂರು ಇವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!