ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಜ್ಜನ ಕಪಿಲೆ ಬಳಿ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಬಸ್ನ ಮುಂಭಾಗ ಜಖಂಗೊಂಡಿದೆಯಾದರೂ, ಬಸ್ನಲ್ಲಿದ್ದ ಎಲ್ಲಾ 42 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ನೆರವಾದರು.
ಚಾಲಕನ ಅಜಾಗರೂಕತೆ ಅಥವಾ ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




