ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲಾಡಳಿತದ ವತಿಯಿಂದ 2026ರ ಅಕ್ಟೋಬರ್ 11ರಿಂದ 21ರವರೆಗೆ ಅದ್ದೂರಿಯಾಗಿ ಆಯೋಜಿಸಲಾಗಿರುವ 'ತುಮಕೂರು ದಸರಾ-2026' ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಅಶ್ವಿಜಾ ಬಿ.ವಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅಶೋಕ್ ಕೆ.ವಿ. ಉಪಸ್ಥಿತರಿದ್ದರು.



