Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ-ಹೊಸಪೇಟೆ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದರು.


ಇದು ಕರ್ನಾಟಕದ ಸರಕು ಸಾಗಣೆ ಮತ್ತು ಜನ ಸಂಚಾರದ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ದೃಢ ನಿರ್ಧಾರವಾಗಿದೆ. ಇದರ ಭಾಗವಾಗಿ 65 ಕಿ.ಮೀ. ಉದ್ದದ ಈ ರೈಲು ಮಾರ್ಗದ ವಿಸ್ತರಣೆಯು ಗಣಿಗಾರಿಕೆ, ಉಕ್ಕು ಉತ್ಪಾದನೆ ಹಾಗೂ ಕೈಗಾರಿಕೆಗಳ ಪೂರಕ ವ್ಯವಸ್ಥೆ ವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪರ್ಕ ಸೌಲಭ್ಯವನ್ನು ಹೆಚ್ಚಿಸುವ ಮೂಲಕ ಈ ಯೋಜನೆಯು ಪ್ರಯಾಣಿಕರ ಸೇವೆಗಳನ್ನು ಹೆಚ್ಚು ಸಕ್ರಿಯಗೊಳಿಸುತ್ತದೆ. ಸರಕು ಸಾಗಾಣಿಕೆಯನ್ನು ಇನ್ನಷ್ಟು ಸುಗಮಗೊಳಿಸುತ್ತದೆ ಹಾಗೂ ಐತಿಹಾಸಿಕ, ವಿಶ್ವ ಪಾರಂಪರಿಕ ತಾಣವಾದ ಹಂಪಿ ಮತ್ತು ತುಂಗಭದ್ರಾ ಅಣೆಕಟ್ಟೆಯಂತಹ ಪ್ರಸಿದ್ಧ ತಾಣಗಳಿಗೆ ಪ್ರವಾಸಿಗರ ಭೇಟಿಗೆ ಉತ್ತೇಜನ ನೀಡುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ಯೋಜನೆಯ ಅನುಷ್ಠಾನದಿಂದ ವಾರ್ಷಿಕ 323 ಕೋಟಿಯಷ್ಟು ಬೃಹತ್ ಮೊತ್ತದ ಸರಕು ಸಾಗಾಣಿಕೆ ವೆಚ್ಚ ಉಳಿತಾಯ ಆಗುತ್ತದೆ ಹಾಗೂ ಇಂಗಾಲದ ಹೊರಸೂಸುವಿಕೆಯಲ್ಲಿ ಗಣನೀಯವಾಗಿ ತಗ್ಗುತ್ತಿದೆ. ಈ ಉಪಕ್ರಮವು ಆರ್ಥಿಕ ಬೆಳವಣಿಗೆ, ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST