ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ರಕ್ಷಣಾ ಸಚಿವರು ಹಾಗೂ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್ ಅವರು ನಗರದ ಆರ್.ಟಿ. ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದರು.
ನಿವಾಸಕ್ಕೆ ಆಗಮಿಸಿದ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಹಿರಿಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.




