Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮುಂಬರುವ ಎಲ್ಲ ಚುನಾವಣೆ ನಡೆಸಲು ಶಿಫಾರಸು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ.


ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಮಾಧ್ಯಮಗೋಷ್ಟಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ಅವರು ತಿಳಿಸಿದರು. ಸ್ಥಳೀಯ ಚುನಾವಣೆಗಳಿಗೆ ಮತದಾರರ ಪಟ್ಟಿ ಸಿದ್ಧಪಡಿಸಲು, ಪರಿಷ್ಕರಣೆ, ಅಗತ್ಯ ಕಾನೂನು ಮತ್ತು ನಿಯಮಾವಳಿ ಬದಲಾವಣೆ ಮಾಡುವ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ನಿರ್ಣಯ ಮಾಡಿದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ಮಾಡುವುದಕ್ಕೆ ಸಚಿವ ಸಂಪುಟ ನಿರ್ಣಯ ಮಾಡಿದೆ. ಇದಕ್ಕೆ ಕೆಲವು ತಿದ್ದುಪಡಿಗಳು ಮತ್ತು ನಿಯಮಾವಳಿಗಳು ಬೇಕಾಗುತ್ತವೆ‌. ಅಗತ್ಯ ಕಾನೂನು ತಿದ್ದುಪಡಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ತಯಾರಿಕೆಯಲ್ಲಿ ವ್ಯತ್ಯಾಸಗಳಾಗಿದ್ದು ಮತಗಳ್ಳತನ ಆರೋಪಗಳು ಕೇಳಿಬಂದಿವೆ. ಜೊತೆಗೆ ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. ಜನರ ಮನಸ್ಥಿತಿಯ ಆಧಾರದ ಮೇಲೆ ಈ ತೀರ್ಮಾನ ಮಾಡಲಾಗಿದೆ. ಹಾಗಾಗಿ, ಅಗತ್ಯ ಕಾನೂನು ತಿದ್ದುಪಡಿ‌ತರಲು ಮತ್ತು ನಿಯಮಾವಳಿ ರಚನೆ ಮಾಡಲು ಶಿಫಾರಸ್ಸಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!