Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Business News

ವಾಲ್ಮೀಕಿ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.


ಬ್ಯಾಕ್ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಗರಿಷ್ಠ 1 ಲಕ್ಷದವರೆಗೆ ಕಿರು ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ.50 ಸಾವಿರ ಸಹಾಯಧನ, ಹೈನುಗಾರಿಕೆ ನಡೆಸಲು ಘಟಕದ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಠ ರೂ.1.25 ಲಕ್ಷ ಸಹಾಯಧನ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಉದ್ಯಮಗಳ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ, ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ಹಾಗೂ ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿಸಲು ಘಟಕದ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಠ ರೂ.4 ಲಕ್ಷ ಸಹಾಯಧನ ನೀಡಲಾಗುವುದು. ಈ ಎಲ್ಲಾ ಯೋಜನೆಗಳಿಗೂ ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.  


ಪ್ರೇರಣಾ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಕನಿಷ್ಠ 10 ಜನರಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ.2.5 ಲಕ್ಷ ಸಹಾಯಧನ ಹಾಗೂ ರೂ.2.5 ಲಕ್ಷ ಬ್ಯಾಂಕ್ ಸಾಲ ನೀಡಲಾಗುವುದು. ಯೋಜನೆಯಡಿ ಘಟಕದ ಗರಿಷ್ಠ ವೆಚ್ಚ 5 ಲಕ್ಷವಾಗಿದೆ.   

ಗಂಗಾಕಲ್ಯಾಣ ನೀರಾವರಿ ಯೋಜನೆಯಡಿ 5 ಎಕರೆ ಒಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಘಟಕದ ವೆಚ್ಚ ರೂ.3.75 ಲಕ್ಷವಾಗಿದ್ದು, ಇದರಲ್ಲಿ ರೂ.50 ಸಾಲವನ್ನು ನಿಗಮದಿಂದ ನೀಡಲಾಗುತ್ತದೆ.


ಭೂ ಒಡೆತನ ಯೋಜನೆಯಡಿ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಲು ಘಟಕ ವೆಚ್ಚ ರೂ.20 ಲಕ್ಷದಲ್ಲಿ ಶೇ.50ರ ಅನುಪಾತದಲ್ಲಿ ಸಹಾಯಧನ ಹಾಗೂ ಸಾಲ ನೀಡಲಾಗುವುದು.


ಜಿಲ್ಲೆಯ ಪರಿಶಿಷ್ಟ ಪಂಗಡದ ಆಸಕ್ತರು ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್  http://sevasindhu.karnataka.gov.in        ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.17 ಕಡೆಯ ದಿನವಾಗಿದ್ದು, ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರಸ್ವತಿಪುರಂ ಮುಖ್ಯ ರಸ್ತೆಯಲ್ಲಿರುವ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08194-200430 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!