Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮೈಸೂರಿನಲ್ಲಿ ವಿಜಯೇಂದ್ರ ಬೇನಾಮಿ ಆಸ್ತಿ

ಮೈಸೂರಿನಲ್ಲಿ ವಿಜಯೇಂದ್ರ ಬೇನಾಮಿ ಆಸ್ತಿ
ಚಂದ್ರವಳ್ಳಿ ನ್ಯೂಸ್, ಮೈಸೂರು :
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರೊಂದಿಗೆ ಕೈಜೋಡಿಸಿ ಮೈಸೂರಿನಲ್ಲಿ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಸೋಮವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈರನಗೆರೆಯಲ್ಲಿ ಸೈಯದ್ ಹಬೀಬ್ ಉರ್ ರೆಹಮನ್, ಸೈಯದ್ ನಸೃತ್, ಬಿಬಿ ಆಯೇಷ ಸೇರಿ 11 ಜನರ ಹೆಸರಿಲ್ಲಿದ್ದ ಜಂಟಿ ಜಾಗ. ಈರನಗೆರೆ ಸರ್ವೆ ನಂ 85/2 ರಲ್ಲಿ 1 ಎಕರೆ 3 ಗುಂಟೆ ಜಾಗ ವಶಕ್ಕೆ ಪಡೆದಿತ್ತು. ಇದೇ ಜಾಗಕ್ಕೆ 7-7-2021ರಂದು ಬದಲಿ ನಿವೇಶನಕ್ಕೆ ಪ್ರಾಧಿಕಾರಕ್ಕೆ ಅರ್ಜಿ. ಅರ್ಜಿ ಸಲ್ಲಿಸಿದ ಬಳಿಕ‌13-7-2021 ರಂದು 50:50 ಅನುಪಾತದಲ್ಲಿ 12057 ಅಡಿ ವಿಸ್ತೀರ್ಣದ ಜಾಗ ಮಂಜೂರಾತಿ‌‌ಮಾಡಲಾಗಿದೆ.

50 ವರ್ಷಗಳ ನಂತರ ಮುಡಾಗೆ ಮೂಲ ಮಾಲೀಕರ ಕಡೆಯಿಂದ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಸಿ. ಅಂದಿನ ಮುಡಾ ಆಯುಕ್ತ ಡಿ.ಬಿ.ನಟೇಶ್, ಇಂದಿನ ಬಿಜೆಪಿ ಜಿಲ್ಲಾಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿಕೊಂಡು ಅಕ್ರಮ ಎಸಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತ ವಲಯದಲ್ಲಿ ಮಹಾದೇವಸ್ವಾಮಿ ಗುರುತಿಸಿಕೊಂಡಿದ್ದು, ಎಲ್.ಆರ್. ಮಹದೇವಸ್ವಾಮಿ ಅವರ ಪತ್ನಿ ಹೆಸರಲ್ಲಿ ಬಿ.ವೈ. ವಿಜಯೇಂದ್ರ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಳಿಕ ಹೆಚ್ಚುವರಿಯಾಗಿ ಸರಸ್ವತಿಪುರಂನಲ್ಲಿ 50x80 ಹೆಚ್ಚುವರಿ ನಿವೇಶನವನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿದ್ದಾರೆ. ಅದೇ ಬಡಾವಣೆ ಬಿಟ್ಟು ಕೋಟಿ ಕೋಟಿ ಬೆಲೆ ಬಾಳುವ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಿಸಿಕೊಂಡಿದ್ದಾರೆ. ಬಳಿಕ ಇದೇ ನಿವೇಶನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪತ್ನಿ ಸೌಮ್ಯ ಎಂ ಸ್ವಾಮಿ ಹೆಸರಲ್ಲಿ ನಿವೇಶನ ಖರೀದಿಸಿದ್ದಾರೆ.

ಮಾರುಕಟ್ಟೆ ಮೌಲ್ಯದ ಪ್ರಕಾರ, ಸೈಟ್ 7 ಕೋಟಿ ರೂ.ಗಿಂತ ಹೆಚ್ಚು ಮೌಲ್ಯವುಳ್ಳದ್ದಾಗಿದೆ, ಆದರೆ ಸೌಮ್ಯ ಅದನ್ನು 5.36 ಲಕ್ಷಕ್ಕೆ ಖರೀದಿಸಿದ್ದಾರೆ. ನಟೇಶ್ ಮತ್ತು ಮಹದೇವಸ್ವಾಮಿ ಅವರು ವಿಜಯೇಂದ್ರ ಅವರ ಆಪ್ತರಾಗಿರುವ ಕಾರಣ, ಕೋಟ್ಯಾಂತರ ಬೆಲೆ ಬಾಳುವ ಪ್ರದೇಶದಲ್ಲಿ ನಿವೇಶನ ಪಡೆಯಲು ಸಂಚು ರೂಪಿಸಲಾಗಿದೆ. ಇದೀಗ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಸರಸ್ವತಿ ಪುರಂನಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡುತ್ತಿದ್ದಾರೆ. ಕೂಡಲೇ ಈ ನಿವೇಶನವನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಮುಡಾ ಭ್ರಷ್ಟಾಚಾರದ ಪಿತಾಮಹ ಬಿ.ವೈ. ವಿಜಯೇಂದ್ರ. 2021 ರಲ್ಲಿ ವಿಜಯೇಂದ್ರ ಪಟಾಲಮ್ ಮೂಲಕ ಭ್ರಷ್ಟಾಚಾರ ಮಾಡಿದ್ದರು. ಡಿ.ಬಿ. ನಟೇಶ್ ಮುಡಾ ಮಾಜಿ ಆಯುಕ್ತ, ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ದೇವಸ್ಥಾನಗಳಿಗೆ ಹೆಲಿಕಾಪ್ಟರ್ ನಲ್ಲಿ ಹೊಗುತ್ತಾ ಇದ್ದರು ಎಂದು ಆರೋಪಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!