ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಇದೇ ತಿಂಗಳ ೨೩ ರಂದು ನಡೆಯಲಿರುವ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಜಯಶಾಲಿಯನ್ನಾಗಿಸುವಂತೆ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ಬಾಬು ಮನವಿ ಮಾಡಿದ್ದಾರೆ.
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ್, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಪುಟ್ಟಣ್ಣ ಇವರುಗಳನ್ನು ಬಹುಮತಗಳಿಂದ ಗೆಲ್ಲಿಸುವಂತೆ ಪದವೀಧರರು, ಶಿಕ್ಷಕರು ಹಾಗೂ ಉಪನ್ಯಾಸಕರುಗಳಲ್ಲಿ ರಮೇಶ್ಬಾಬು ವಿನಂತಿಸಿದ್ದಾರೆ.
ಪ್ರತಿ ಮನೆಯಲ್ಲಿಯೂ ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಯ ಫಲಾನುಭವಿಗಳಿದ್ದಾರೆ. ಕಾರ್ಯಕರ್ತರು, ಮುಖಂಡರುಗಳು ಅಭ್ಯರ್ಥಿಗಳ ಪರ ಸುತ್ತಾಡಿ ಪದವೀಧರರು ಶಿಕ್ಷಕರು ಹಾಗೂ ಉಪನ್ಯಾಸಕರುಗಳನ್ನು ಸಂಪರ್ಕಿಸಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ರಮೇಶ್ಬಾಬು ಒತ್ತಾಯಿಸಿದ್ದಾರೆ.



