Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಜನರ ಸೇವೆಗೆ ನಾವು ಬದ್ಧ" - ಡಿಕೆಶಿ ವಿನಮ್ರ ಪೋಸ್ಟ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದ್ದು
, ನಿಯೋಜಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ಲೋಕ ಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಹಕ್ಕು ಮಂಡನೆಯನ್ನು ಪುರಸ್ಕರಿಸಿದ ರಾಜ್ಯಪಾಲರು, ಸರ್ಕಾರ ರಚಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.

"ಜನರ ಸೇವೆಗೆ ನಾವು ಬದ್ಧ" - ಡಿಕೆಶಿ ವಿನಮ್ರ ಪೋಸ್ಟ್:
ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು 'X' ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

"ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನನ್ನನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಕ್ಕೆ ನಾನು ಅತ್ಯಂತ ವಿನಮ್ರನಾಗಿದ್ದೇನೆ. ಸಮಗ್ರತೆ, ಸಮರ್ಪಣಾ ಭಾವ ಮತ್ತು ನಿರ್ದಿಷ್ಟ ಉದ್ದೇಶದೊಂದಿಗೆ ಕರ್ನಾಟಕದ ಜನತೆಯ ಸೇವೆ ಮಾಡಲು ನಾನು ಹಾಗೂ ಕಾಂಗ್ರೆಸ್ ಪಕ್ಷ ಬದ್ಧರಾಗಿದ್ದೇವೆ," ಎಂದು ಅವರು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಸಂಪುಟ ವಿಸರ್ಜನೆ:
ಇದಕ್ಕೂ ಮುನ್ನ, ಗುರುವಾರ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮರುದಿನವೇ ರಾಜೀನಾಮೆಯನ್ನು ಅಂಗೀಕರಿಸಿದ್ದ ರಾಜ್ಯಪಾಲ ಗೆಹ್ಲೋಟ್ ಅವರು ಹಾಲಿ ಸಚಿವ ಸಂಪುಟವನ್ನು ವಿಸರ್ಜಿಸಿದ್ದರು. ಇದೀಗ ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು ಸಮಾಜಸೇವಕ ಕೆ.ಆರ್. ಶಿವಪ್ರಕಾಶ್ ಸ್ಮರಣೋತ್ಸವ: ಅಧಿಕಾರ ವ್ಯಾಮೋಹವಿಲ್ಲದ ಸರಳ ಸಜ್ಜನಿಕೆಯ ಧೀಮಂತ ವ್ಯಕ್ತಿತ್ವಪತ್ರಕರ್ತರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಬೊಮ್ಮಾಯಿಜಾಗತಿಕ ತಾಪಮಾನಕ್ಕೆ ಬ್ರೇಕ್ ಹಾಕಲು ಮಕ್ಕಳಿಂದ ಶ್ಲಾಘನೀಯ ಕಾರ್ಯ: 1000 ಬೀಜದ ಉಂಡೆಗಳ ವಿತರಣೆ!ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿಹಿರಿಯೂರು ಉಪ ಚುನಾವಣೆಗೆ ಜೆಡಿಯು ನಿಂದ ಅಭ್ಯರ್ಥಿ ಕಣಕ್ಕೆಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿಭೀಕರ ಸರಣಿ ಅಪಘಾತ: ಆಟೋಗೆ ಗುದ್ದಿದ ಥಾರ್‌ಕಾರ್‌; ಐವರ ದಾರುಣ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯಸಂಪುಟ ರಚನೆ: ಹೈಕಮಾಂಡ್‌ಗೆ ತಲುಪದ ಸಿಎಂ ಪ್ರಸ್ತಾವನೆ; ಜೂನ್ 3ರ ನಂತರ ನಿರ್ಧಾರ ಎಂದ ಖರ್ಗೆಕೈ ಸಂಪುಟ ಸರ್ಕಸ್: '11:11:11' ಸೂತ್ರದೊಂದಿಗೆ ಡಿಕೆಶಿ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಮುಂದು; ಡಿಸಿಎಂ ಹುದ್ದೆ ಇಲ್ಲ!