Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಾಲಿ ತಟ್ಟೆಯಲ್ಲಿ ಕೈ ತೊಳೆಯುವ ಭಾಗ್ಯ ಕರುಣಿಸುತ್ತಿದ್ದೀರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಅನ್ನರಾಮಯ್ಯ' ಎಂದು ಹೊಗಳಿಸಿ ಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ? ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲೀಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4500 ಲಾರಿಗಳು)ಅವರ ಬದುಕಿನ ಭಾಗ್ಯಕ್ಕೆ ಬರೆ ಎಳೆದಿದ್ದೀರಿ. ಇದರ ಪರಿಣಾಮ ಇಂದಿನಿಂದ ಅನ್ನ ಭಾಗ್ಯವನ್ನು ಅವಲಂಬಿಸಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ಖಾಲಿ ತಟ್ಟೆಯಲ್ಲಿ ಕೈ ತೊಳೆಯುವ ಭಾಗ್ಯ ಕರುಣಿಸುತ್ತಿದ್ದೀರಿ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯದ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಬಾಡಿಗೆ ಕೊಡುವ ಸ್ಥಿತಿಯಲ್ಲೂ ಇಲ್ಲದ ಕೆಟ್ಟ ಪರಿಸ್ಥಿತಿಗೆ ತಲುಪಿದೆ ಎಂದರೆ ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದರ ಸೂಚನೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದೆ. 

ಅನ್ನಭಾಗ್ಯದ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವೊಂದೇ ಸಾಗಣೆ ವೆಚ್ಚ ಭರಿಸಬೇಕಿಲ್ಲ, ಪ್ರಧಾನಿ ಮಾನ್ಯ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ನೀಡುತ್ತಿರುವ ಉಚಿತ 5 ಕೆ.ಜಿ ಅಕ್ಕಿಯ ಜೊತೆಗೆ ಆಹಾರ ಧಾನ್ಯ ಸಾಗಣೆಯ ವೆಚ್ಚವನ್ನೂ ಭರಿಸುತ್ತಿದೆ ಆದರೂ ಲಾರಿ ಮಾಲೀಕರಿಗೆ ಬಾಡಿಗೆ ಕೊಡದೆ ಏಕಿಷ್ಟು ಸತಾಯಿಸುತ್ತಿದ್ದೀರಿ ಎಂದು ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ.

ನಿಮ್ಮ ಸರ್ಕಾರದ ಭ್ರಷ್ಟ ವ್ಯವಹಾರಗಳಿಗೆ ಆದಾಯ ಮೂಲಗಳನ್ನು ಕಂಡುಹಿಡಿದುಕೊಳ್ಳಲು ಬೆಲೆ ಏರಿಕೆ, ಅವೈಜ್ಞಾನಿಕ ತೆರಿಗೆಗಳನ್ನು ಜನರ ಮೇಲೆ ಹೇರುತ್ತಲೇ ಇದ್ದೀರಿ, ನಿಮ್ಮ ಕಮಿಷನ್ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾದಿಸದಂತೆ ಈ ಕೂಡಲೇ ಲಾರಿ ಮಾಲೀಕರ ಬಾಕಿ ಹಣವನ್ನು ಪಾವತಿಸಿ ಹಸಿದವರ ಆಕ್ರೋಶ ಹಾಗೂ ಲಾರಿಯನ್ನು ನಂಬಿ ಜೀವನ ಮಾಡುತ್ತಿರುವ ಲಾರಿ ಮಾಲೀಕರು ಹಾಗೂ ಚಾಲಕರ ಕುಟುಂಬಗಳ ಶಾಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಿ ಎಂದು ವಿಜಯೇಂದ್ರ ತಾಕೀತು ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST